Wednesday, September 16, 2026

ವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ

ವಿಜಯಪುರ: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದುರ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮೀಜಿ ಸಿಟ್ಟಿಗೆದ್ದು ಏಕಾಏಕಿ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

Copying is disabled on Udupi Digital News.