Monday, April 20, 2026

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಯುಡಿ ನ್ಯೂಸ್ ಡಾಟ್ ಕಾಮ್


ರಾಣೆಬೆನ್ನೂರು: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಭಾನುವಾರ ರಾಣೆಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.

ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.

450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದರು.

More like this
Related

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಭವ್ಯ ಸ್ವಾಗತ

ಯುಡಿ ನ್ಯೂಸ್ ಡಾಟ್ ಕಾಮ್ ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ...

ಕುವೆಂಪು ವಿವಿ ಹಗರಣ: ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

ಯುಡಿ ನ್ಯೂಸ್ ಡಾಟ್ ಕಾಮ್ ಶಿವಮೊಗ್ಗ: ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಸ್ಮಾರ್ಟ್ ಕ್ಲಾಸ್ ಕಾಮಗಾರಿಯಲ್ಲಿ...

ಕುಂದಾಪುರ: ದಲಿತ ಹಕ್ಕುಗಳ ಸಮಿತಿಯಿಂದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ...

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ‘ಶ್ರೀ ಶಾರದಾ ಆಸರೆ ಯೋಜನೆ’ ಆರಂಭ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಮಹತ್ತರ ಯೋಜನೆ ಯುಡಿ ನ್ಯೂಸ್ ಡಾಟ್...

Copying is disabled on Udupi Digital News.