Monday, September 14, 2026

ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ

ಉಡುಪಿ ಡಿಜಿಟಲ್ ನ್ಯೂಸ್ ಡಾಟ್
ಬೆಂಗಳೂರು:
ಕನ್ನಡದ ಹಿರಿಯ ಸಾಹಿತಿ, ಪ್ರಕಾಶಕಿ ಆಶಾ ರಘು ಅವರು ನಗರದ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಆಶಾ ಅವರು, ಅದೇ ನೋವಿನಲ್ಲಿ ಸಾವಿನ ಹಾದಿ ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಆಶಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆಶಾ ರಘು ಅವರು ಆವರ್ತ, ಗತ, ಮಾಯೆ, ಚಿತ್ತರಂಗ, ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು ಬರೆದಿದ್ದಾರೆ. ಆರನೇ ಬೆರಳು, ಬೊಗಸೆಯಲ್ಲಿ ಕಥೆಗಳು, ಅಪರೂಪದ ಪುರಾಣ ಕಥೆಗಳು ಸೇರಿದಂತೆ ಹಲವು ಕಥಾಸಂಕಲನಗಳನ್ನು ರಚಿಸಿದ್ದಾರೆ. ಅಲ್ಲದೆ, ಚೂಡಾಮಣಿ, ಕ್ಷಮಾದಾನ, ಬಂಗಾರದ ಪಂಜರ ಮತ್ತು ಪೂತನಿ ನಾಟಕಗಳನ್ನು ಬರೆದಿದ್ದಾರೆ.

ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಸಂದಿವೆ. ಅಲ್ಲದೆ, ಸಾಹಿತ್ಯಾಮೃತ ಸರಸ್ವತಿ ಎಂಬ ಬಿರುದನ್ನೂ ಪಡೆದಿದ್ದಾರೆ. ಕೆ.ಸಿ ರಘು ಮತ್ತು ಆಶಾ ದಂಪತಿಗೆ ಓರ್ವ ಮಗಳು ಇದ್ದಾರೆ. ಸಾಹಿತ್ಯ ಲೋಕ ಮತ್ತು ತಮ್ಮ ಅಪಾರ ಬಳಗವನ್ನು ಅಗಲಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.