Friday, April 17, 2026

ಯೋಗೇಶ್‌ ಗೌಡ ಹತ್ಯೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಯುಡಿ ನ್ಯೂಸ್ ಡಾಟ್ ಕಾಮ್


ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸಲಿದೆ.

ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಕೋರ್ಟ್‌ ಬುಧವಾರ ಘೋಷಿಸಿದ್ದು, ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ನ್ಯಾಯಾಲಯ ತೀರ್ಪನ್ನು ನಾಳೆಗೆ ಮುಂದೂಡಿದೆ.

ಗುರುವಾರ ನ್ಯಾಯಾಲಯವು ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಯ ವಾದಗಳನ್ನು ಆಲಿಸಿತು. ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಯೋಗೇಶ್ ಗೌಡರ್ ಹತ್ಯೆಗೆ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದರು.

ಆರೋಪಿಗಳನ್ನು ಕಾನೂನುಬಾಹಿರ ಸಭೆ, ಗಲಭೆ ಮತ್ತು ಕೊಲೆಗೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿಯೂ ದೋಷಿಗಳೆಂದು ಘೋಷಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಇದರಲ್ಲಿ ಐಪಿಸಿ ಸೆಕ್ಷನ್ 302 ಜೊತೆಗೆ ಸೆಕ್ಷನ್ 120(ಬಿ) ಸೇರಿದೆ. ಅಪರಾಧಿಗಳಲ್ಲಿ ಹಲವರನ್ನು ಹೆಚ್ಚುವರಿಯಾಗಿ ಸಾಕ್ಷ್ಯಗಳ ನಾಶಕ್ಕೆ ಕಾರಣರಾದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಲಾಯಿತು. ಇನ್ನು 20ನೇ ಆರೋಪಿಯಾಗಿದ್ದ ವಾಸುದೇವ ರಾಮ ನಿಲೇಕಣಿ (ಧಾರವಾಡ ಉಪನಗರ ವಿಭಾಗದ ಎಸಿಪಿ) ಹಾಗೂ 21ನೇ ಆರೋಪಿಯಾಗಿದ್ದ ಸೋಮಶೇಖರ ಬಸಪ್ಪ ನ್ಯಾಮಗೌಡ (ವಿನಯ್‌ ಕುಲಕರ್ಣಿ ಆಪ್ತ ಸಹಾಯಕ) ಅವರನ್ನು ನಿರ್ದೋಷಿಗಳೆಂದು ಕೋರ್ಟ್‌ ಹೇಳಿತ್ತು.

2016ರ ಜೂನ್ ನಲ್ಲಿ ಧಾರವಾಡದ ಜಿಮ್ನಾಷಿಯಂನಲ್ಲಿ ಬಿಜೆಪಿ ನಾಯಕ ಮತ್ತು ಧಾರವಾಡ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯ ಯೋಗೇಶ್ ಗೌಡರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ನಂತರ ಸಿಬಿಐಗೆ ಹಸ್ತಾಂತರಿಸಲಾಗಿದ್ದು ಪ್ರಕರಣ ಸಂಬಂಧ 100ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು.

More like this
Related

ಕೂಲಿಕಾರರ ಹೋರಾಟದ ಗಟ್ಟಿ ಧ್ವನಿಯಾಗಿದ್ದ ವೆಂಕಟೇಶ ಕೋಣಿ: ಸುರೇಶ್ ಕಲ್ಲಾಗರ

ಯುಡಿ ನ್ಯೂಸ್ ಡಾಟ್ ಕಾಮ್ಬೈಂದೂರು: ಬಾಡಿಗೆ ಮನೆಯಲ್ಲಿರುವ ಕೂಲಿಕಾರರಿಗೆ ಸ್ವಂತ ಮನೆ...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ...

45 ಡಿಗ್ರಿ ತಲುಪಿದ ತಾಪಮಾನ: ಬಿರು ಬಿಸಿಲಿಗೆ ಕಲಬುರಗಿ ಕಂಗಾಲು

ಯುಡಿ ನ್ಯೂಸ್ ಡಾಟ್ ಕಾಮ್ ಕಲಬುರಗಿ: ಏಪ್ರಿಲ್ 15ರಂದು ಕಲಬುರಗಿಯ ಔರಾದ್ ಹೋಬಳಿಯಲ್ಲಿ...

SSLCಯಲ್ಲಿ ತೃತೀಯ ಭಾಷೆಗೆ ಅಂಕವನ್ನೇ ಕೊಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಯುಡಿ ನ್ಯೂಸ್ ಡಾಟ್ ಕಾಮ್ ಬೆಂಗಳೂರು: ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ...

Copying is disabled on Udupi Digital News.