Monday, September 14, 2026

ಹೆಮ್ಮಾಡಿಯಲ್ಲಿ ಕಾರು–ಬೈಕ್ ಢಿಕ್ಕಿ: ಬೈಕ್ ಸವಾರ ಸಾವು

ಕುಂದಾಪುರ: ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ನರಸಿಂಹ ಆಚಾರ್ ಅವರು ತಮ್ಮ ಬೈಕ್‌ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದರು. ಇದೇ ವೇಳೆ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ನರಸಿಂಹ ಆಚಾರ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಕಿವಿ ಹಾಗೂ ಮೂಗಿನಿಂದ ರಕ್ತಸ್ರಾವವಾಗಿದ್ದು, ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಪ್ರಜ್ಞಾಹೀನರಾಗಿದ್ದ ಅವರನ್ನು ಸ್ಥಳೀಯರ ಸಹಕಾರದಿಂದ ಗಂಗೊಳ್ಳಿಯ ಎಮ್ಎಚ್ಐ ಆಂಬುಲೆನ್ಸ್ ನಿರ್ವಾಹ ಇಬ್ರಾಹಿಂ ಗಂಗೊಳ್ಳಿ ತಮ್ಮ ಆಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಗಿಸುವ ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.